Big News
Trending

ಅಪರಿಚಿತ ಮಹಿಳೆಯ ಶವ ಪತ್ತೆ : ಅಂತ್ರವಳ್ಳಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಸಿಕ್ಕ ಶವ

ಕುಮಟಾ: ತಾಲೂಕಿನ ದೀವಗಿ ಗ್ರಾ.ಪಂ ವ್ಯಾಪ್ತಿಯ ಅಂತ್ರವಳ್ಳಿ ಅರಣ್ಯ ಪ್ರದೇಶದಲ್ಲಿ ಸುಮಾರು 25-30 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯೊಬ್ಬಳ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತ್ತೆಯಾದ ಮಹಿಳೆಯ ಶವ ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಅಂತ್ರವಳ್ಳಿಯಿoದ ಸಿರ್ಸಿ-ಅಂಕೋಲಾಕ್ಕೆ ಸಂಪರ್ಕ ಕಲ್ಪಿಸುವ ಒಳರಸ್ತೆ ಸಮೀಪದ ಅರಣ್ಯ ಪ್ರದೇಶದಲ್ಲಿ ಸೋಮವಾರ ಸ್ಥಳೀಯರೊಬ್ಬರಿಗೆ ಈ ಶವ ಕಾಣಿಸಿಕೊಂಡಿದ್ದು, ಕೂಡಲೇ ಕುಮಟಾ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಪರಿಶೀಲನೆ ನಡೆಸಿದ್ದಾರೆ. ಮಹಿಳೆ ವಿವಾಹಿತೆಯೋ ಅಥವಾ ಅವಿವಾಹಿತೆಯೋ ಎಂಬುದು ತಿಳಿದುಬಂದಿಲ್ಲ. ಕೊರಳಲ್ಲಿ ಯಾವುದೇ ಸರ ಇಲ್ಲ. ತನ್ನ ಚೂಡಿದಾರದ ವೇಲಿನಲ್ಲಿ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ್ ತನಿಖೆಯಿಂದಷ್ಟೇ ಹೊರಬೀಳಬೇಕಿದೆ.

ಶವ ಪತ್ತೆಯಾದ ಸ್ಥಳದಲ್ಲಿ ನೀರಿನ ಬಾಟಲಿ, ಚಪ್ಪಲಿ ಪತ್ತೆಯಾಗಿದೆ. ಶವವನ್ನು ಕಂಡ ಸ್ಥಳೀಯರು ಮಹಿಳೆಯ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಕುರಿತು ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಯೋಗೀಶ್ ಮಡಿವಾಳ, ಕುಮಟಾ

Back to top button